ವಚನ - 981     
 
ಎರಡು ಬೆಟ್ಟದ ನಡುವೆ ಹಳ್ಳವ ಮಿಳಿಯ ಮಾಡಿ, ಬಾವಿಯನುತ್ತೆನೆಂಬ ಮರುಳತನವಾ ನೋಡಾ! ತೊರೆಯ ಮೇಲೆ ಮಾರುಗೋಲನಿಕ್ಕಿ ಹುಟ್ಟ ಮುರಿದು ಹೋದ ಅಂಬಿಗನ ನೋಡಾ. ಮರೆದು ಮಲಗಿದ ಬೆಕ್ಕಿನ ಕಿವಿಯ ಇಲಿ ಮೇದಂತೆ ಗುಹೇಶ್ವರನೆಂಬ ಲಿಂಗ ನಿರಾಳದ ನಿಲವು.