ವಚನ - 982     
 
ಎರಡೆಂಬತ್ತು ಕೋಟಿ ಗೀತವ ಹಾಡಿದರೇನಯ್ಯಾ? ಬೆಟ್ಟಕ್ಕೆ ನಾಯಿ ಬೊಗಳಿದಂತಾಯಿತ್ತಯ್ಯಾ. ಮನವು ಘನವ ನೆಮ್ಮದು, ಘನವು ಮನವ ನೆಮ್ಮದು. ಹಾಡಿದರೇನು ಓದಿದರೇನು? ಗುಹೇಶ್ವರಾ, ನೀನೊಲಿದ ಕಾಲಕ್ಕೆ ಎರಡೆಂಬತ್ತು ಕೋಟಿ ಗೀತವೆಲ್ಲವೂ ನಿಮ್ಮದೊಂದು ಮಾತಿನೊಳಡಕವಯ್ಯಾ.