Index   ವಚನ - 9    Search  
 
ಅಂಥ ಬ್ರಹ್ಮಾಂಡವ ಏಳುಸಾವಿರದ ಅರವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಮೋಚಿಕಾಯೆಂಬ ಭುವನ, ಆ ಭುವನದೊಳು ಮೋಹಸಂಹಾರನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮೂವತ್ತೈದುಕೋಟಿ ಇಂದ್ರಚಂದ್ರಾದಿತ್ಯರು, ಮೂವತ್ತೈದುಕೋಟಿ ಬ್ರಹ್ಮ ನಾರಾಯಣ ರುದ್ರರು, ಮೂವತ್ತೈದುಕೋಟಿ ವೇದಪುರುಷರು ಮುನೀಂದ್ರರು, ನಾಲ್ವತ್ತುಕೋಟಿ ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.