Index   ವಚನ - 22    Search  
 
ಅಂಥ ಬ್ರಹ್ಮಾಂಡವ ಇಪ್ಪತ್ತುಸಾವಿರ ನೂರಾತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಸರ್ವೇಶ್ವರನೆಂಬ ಭುವನ. ಆ ಭುವನದೊಳು ಸರ್ವಗತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರುಕೋಟಿ ನಾರಾಯಣ ರುದ್ರ ಬ್ರಹ್ಮರು, ನೂರುಕೋಟಿ ಇಂದ್ರಚಂದ್ರಾದಿತ್ಯರು, ನೂರುಕೋಟಿ ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ಅಪ್ರಮಾಣಕೂಡಲಸಂಗಮದೇವಾ.