Index   ವಚನ - 29    Search  
 
ಅಂಥ ಬ್ರಹ್ಮಾಂಡವ ಇಪ್ಪತ್ತೇಳುಸಾವಿರದ ಇನ್ನೂರು ಅರವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ತ್ರಿಮೂರ್ತಿಯೆಂಬ ಭುವನ. ಆ ಭುವನದೊಳು ತ್ರಿಪುರಾಂತಕನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾಮೂವತ್ತೈದುಕೋಟಿ ಬ್ರಹ್ಮ ನಾರಾಯಣ ರುದ್ರರು, ನೂರಾಮೂವತ್ತೈದುಕೋಟಿ ಇಂದ್ರಚಂದ್ರಾದಿತ್ಯರು. ನೂರಾಮೂವತ್ತೈದುಕೋಟಿ ವೇದಪುರುಷರು ಮುನೀಂದ್ರರು, ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.