Index   ವಚನ - 30    Search  
 
ಅಂಥ ಬ್ರಹ್ಮಾಂಡವ ಇಪ್ಪತ್ತೆಂಟುಸಾವಿರದ ಇನ್ನೂರಾ ಎಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಶ್ರೀಕಂಠವೆಂಬ ಭುವನ. ಆ ಭುವನದೊಳು ಶ್ರೀಮಹಾದೇವನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾನಾಲ್ವತ್ತುಕೋಟಿ ರುದ್ರ ಬ್ರಹ್ಮ ನಾರಾಯಣರು, ನೂರಾನಾಲ್ವತ್ತುಕೋಟಿ ಇಂದ್ರಚಂದ್ರಾದಿತ್ಯರು, ವೇದಪುರುಷರು, ಮುನೀಂದ್ರರು, ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.