Index   ವಚನ - 37    Search  
 
ಅಂಥ ಬ್ರಹ್ಮಾಂಡವ ಮೂವತ್ತೈದುಸಾವಿರದ ಮುನ್ನೂರಾನಾಲ್ವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಸರ್ವಭೂತದಮನಿಯೆಂಬ ಭುವನ. ಆ ಭುವನದೊಳು ಸರ್ವೇಶ್ವರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾ ಎಪ್ಪತ್ತೈದುಕೋಟಿ ರುದ್ರ-ಬ್ರಹ್ಮ-ನಾರಾಯಣರು, ಇಂದ್ರಚಂದ್ರಾದಿತ್ಯರು, ನೂರಾ ಎಪ್ಪತ್ತೈದುಕೋಟಿ ವೇದಪುರುಷರು,ಮುನೀಂದ್ರರು, ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.