Index   ವಚನ - 46    Search  
 
ಅಂಥ ಬ್ರಹ್ಮಾಂಡವ ನಾಲ್ವತ್ತುನಾಲ್ಕುಸಾವಿರದ ನಾನೂರಾಮೂವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಭವವೆಂಬ ಭುವನ. ಆ ಭುವನದೊಳು ಭವಹರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಇನ್ನೂರಾ ಇಪ್ಪತ್ತುಕೋಟಿ ರುದ್ರ ಬ್ರಹ್ಮ ನಾರಾಯಣರು, ಇನ್ನೂರಾ ಇಪ್ಪತ್ತುಕೋಟಿ ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು ದೇವರ್ಕಳಿಹರು ನೋಡಾ, ಅಪ್ರಮಾಣಕೂಡಲಸಂಗಮದೇವಾ.