Index   ವಚನ - 62    Search  
 
ಅಂಥ ಬ್ರಹ್ಮಾಂಡವ ಅರವತ್ತುಸಾವಿರದ ಐನೂರಾ ತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಉಮಾಪತಿಯೆಂಬ ಭುವನ. ಆ ಭುವನದೊಳು ಉಮಾಸಹಿತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರುಕೋಟಿ ನಾರಾಯಣ-ಬ್ರಹ್ಮ-ರುದ್ರಾದಿಗಳಿಹರು. ಮುನ್ನೂರುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.