Index   ವಚನ - 67    Search  
 
ಅಂಥ ಬ್ರಹ್ಮಾಂಡವ ಅರವತ್ತೈದು ಸಾವಿರದ ಆರುನೂರಾ ನಲವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಭೀಮವೆಂಬ ಭುವನ. ಆ ಭುವನದೊಳು ಭೀಮೇಶ್ವರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರಾ ಇಪ್ಪತ್ತೈದು ಕೋಟಿ ರುದ್ರ-ಬ್ರಹ್ಮ-ನಾರಾಯಣರು, ಮುನ್ನೂರಾ ಇಪ್ಪತ್ತೈದುಕೋಟಿ ಇಂದ್ರಚಂದ್ರಾದಿತ್ಯರಿಹರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.