Index   ವಚನ - 72    Search  
 
ಅಂಥ ಬ್ರಹ್ಮಾಂಡವ ಎಪ್ಪತ್ತುಸಾವಿರದ ಆರುನೂರಾ ತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ವೈಭವನೆಂಬ ಭುವನ. ಆ ಭುವನದೊಳು ರಾಮನಾಥನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರೈವತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಮೂನ್ನೂರೈವತ್ತುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.