Index   ವಚನ - 73    Search  
 
ಅಂಥ ಬ್ರಹ್ಮಾಂಡವ ಎಪ್ಪತ್ತೊಂದುಸಾವಿರದ ಏಳುನೂರಾ ಎಂಟು ಬ್ರಹ್ಮಾಂಡವನೊಳಕೊಂಡುದೊಂದು ಕೃತವೆಂಬ ಭುವನ. ಆ ಭುವನದೊಳು ಭುವನಾಧಿಪತಿಯೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮೂನ್ನೂರೈವತ್ತೈದು ಕೋಟಿ ಬ್ರಹ್ಮ-ನಾರಾಯಣ-ರುದ್ರರಿಹರು ನೋಡಾ. ಮುನ್ನೂರೈವತ್ತೈದು ಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.