Index   ವಚನ - 75    Search  
 
ಅಂಥ ಬ್ರಹ್ಮಾಂಡವ ಎಪ್ಪತ್ತುಮೂರುಸಾವಿರದಾ ಏಳುನೂರಾ ಇಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಯಾಮ್ಯವೆಂಬ ಭುವನ. ಆ ಭುವನದೊಳು ವಜ್ರಕಾಯನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರರವತ್ತೈದುಕೋಟಿ ಬ್ರಹ್ಮ ನಾರಾಯಣ ರುದ್ರರಿಹರು ನೋಡಾ. ಮೂನ್ನೂರರವತ್ತೈದು ಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.