Index   ವಚನ - 86    Search  
 
ಅಂಥ ಬ್ರಹ್ಮಾಂಡವ ಎಂಬತ್ತುನಾಲ್ಕುಸಾವಿರದಾ ಎಂಟುನೂರಾಮೂವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಕಾಳಾಂಜನವೆಂಬ ಭುವನ. ಆ ಭುವನದೊಳು ಕಾಳಕಂಠನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನಾನೂರಿಪ್ಪತ್ತುಕೋಟಿ ರುದ್ರ ಬ್ರಹ್ಮ ನಾರಾಯಣರಿಹರು. ನಾನೂರಿಪ್ಪತ್ತುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.