ವಚನ - 999     
 
ಐದಿಂದ್ರಿಯವನರಿತಲ್ಲದೆ, ಒಂದಿಂದ್ರಿಯಕ್ಕೆ ಸಂದ ಗುಣವನರಿಯಬಾರದು. ಆ ಗುಣ ಏಕಮೂರ್ತಿ ತ್ರಿವಿಧರೂಪಾದ ಕಾರಣ. ಪೂಜೆಯೆಂಬುದ ಪುಣ್ಯವೆಂಬ ಭಾವವಿಲ್ಲದೆ ಮಾಡಿದಡೆ, ನಮ್ಮ ಗುಹೇಶ್ವರಲಿಂಗಕ್ಕೆ ಅನ್ಯವಿಲ್ಲ ಕಾಣಾ ಚಂದಯ್ಯ.