Index   ವಚನ - 96    Search  
 
ಅಂಥ ಬ್ರಹ್ಮಾಂಡವ ತೊಂಬತ್ನಾಲ್ಕು ಸಾವಿರದ ಒಂಬೈನೂರಾ ಮೂವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಅವಿಮುಕ್ತವೆಂಬ ಭುವನ. ಆ ಭುವನದೊಳು ಮುಕ್ತಾಂಗನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನಾನೂರೆಪ್ಪತ್ತುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ನಾನೂರೆಪ್ಪತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.